ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಕಡೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ಗ್ರಾಮ ನಿವಾಸಿ ಫಯಾಝ್ (25) ಎಂಬಾತ ಕೆಎ21 ಬಿ 0593 ನೋಂದಣಿ ಸಂಖ್ಯೆಯ ಬೊಲೆರೋ ಕಂಪನಿಯ ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಠಾಣಾ ಪಿಎಸ್ಐ ಅನಿಲ ಕುಮಾರ ಡಿ ಅವರ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ಮರಳನ್ನು ಚಾರ್ಮಾಡಿಯ ಹೊಸಮಠ ಎಂಬಲ್ಲಿನ ಮೃತ್ಯುಂಜಯ ನದಿಯಿಂದ ಕಳವು ಮಾಡಿ, ಹೆಚ್ಚಿನ ಹಣ ಸಂಪಾದನೆ ಮಾಡುವ ಸಲುವಾಗಿ ಮಾರಾಟ ಮಾಡಲು ಸಾಗಿಸುತ್ತಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿರುವ ಹಿನ್ನಲೆಯಲ್ಲಿ ವಾಹನ ಸಹಿತ ಮರಳನ್ನು ವಶಕ್ಕೆ ಪಡೆದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 26/2024 ಕಲಂ: 379 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.