ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ನನ್ನು 6 ದಿನ ‘CID’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಧಾರವಾಡ ಜೆಎಂಎಫ್ ಸಿ ಕೋರ್ಟ್ ಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಸದ್ಯ ಧಾರವಾಡದ ಕೇಂದ್ರ ಕಾರಗೃಹದಲ್ಲಿರುವ ಫಯಾಜ್ ನನ್ನು ಇಂದು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ.

Leave a Reply