December 11, 2025
WhatsApp Image 2024-04-25 at 10.24.08 AM
ಮಂಗಳೂರು : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ ಎಂದು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ಸದ್ಯ ಅಕ್ಷಯ್ ಅವರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ‌ ಲಭ್ಯವಾಗಿದೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ .

About The Author

Leave a Reply