November 8, 2025
WhatsApp Image 2024-04-25 at 11.03.18 AM
ಮೂಡುಬಿದಿರೆ: ಇಲ್ಲಿನ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಕೃತಜ್ಞತೆ ಸಲ್ಲಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇತ್ತೀಚೆಗೆ ಮೂಲ್ಕಿಯಲ್ಲಿ ನಡೆದ ಬಿಲ್ಲವ ಮಹಾಮಂಡಲದ ಸಮಾವೇಶದಲ್ಲಿ ಬಿಲ್ಲವ ಸಮುದಾಯದವರು ಬಿಲ್ಲವ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎನ್ನುವರ್ಥದಲ್ಲಿ ಶಾಸಕ ಕೋಟ್ಯಾನ್ ಮಾತನಾಡಿದ್ದಾರೆ. ಶಾಸಕರ ಮಾತಿನ ಅರ್ಥ ಈ ಬಾರಿ ಪದ್ಮರಾಜ್ ಅವರನ್ನು ಗೆಲ್ಲಿಸಬೇಕೆಂಬುದಾಗಿದೆ. ಹಾಗಾಗಿ ಅವರು ಈ ಬಾರಿ ಬಿಲ್ಲವ ಸಮುದಾಯದ ಪದ್ಮರಾಜ್ ಅವರ ಬೆಂಬಲಕ್ಕಿದ್ದಾರೆನ್ನುವುದಾಗಿದೆ.
ಅವರ ಈ ನಡೆಗೆ ತುಂಬಾ ಕೃತಜ್ಞತೆಗಳು, ಅವರಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಮಿಥುನ್ ರೈ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ದ.ಕ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಸಾಕಷ್ಟು ಅವಕಾಶಗಳಿವೆ. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಾತಿ, ಧರ್ಮ ರಾಜಕರಣ ಮಾಡುವುದನ್ನು ಬಿಟ್ಟರೆ ಅಭಿವೃದ್ಧಿಯತ್ತ ಜಿಲ್ಲೆಯನ್ನು ಕೊಂಡೊಯ್ಯಲು ವಿಫಲರಾಗಿದ್ದಾರೆ. ಅವರದ್ದು ಶೂನ್ಯ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ಸೂಚಿಸಿದ್ದರೂ ಕಾಂಗ್ರೆಸ್ ನಾಯಕರು ಅವರ ವಿರುದ್ಧದ ವಾಗ್ದಾಳಿ ಮುಂದುವರೆಸಿದರು.
ಪಂಚ ಗ್ಯಾರಂಟಿ ಜನರ ನಂಬಿಕೆಯನ್ನು ಗಟ್ಟಿಗೊಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗೆ ಈ ಎಲ್ಲಾ ಅಂಶಗಳು ಅನುಕೂಲ ಕಲ್ಪಿಸಲಿದೆ. ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದರೂ ಗೃಹಲಕ್ಷ್ಮಿ ಯೋಜನೆಗೆ ಹೆಚ್ಚು ಅರ್ಜಿ ಸಲ್ಲಿಸಿದ್ದಾರೆ ಹಾಗೂ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಹೆಚ್ಚು ಫಲಾನುಭವಿಗಳು ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಜನರು ಎಂದರು. ಕಾಂಗ್ರೆಸ್ ಮುಖಂಡರಾದ ವಲೇರಿಯನ್ ಸಿಕ್ವೇರ, ವಸಂತ ಬೆರ್ನಾಡ್, ಚಂದ್ರಹಾಸ್ ಸನಿಲ್, ಸುರೇಶ್ ಕೋಟ್ಯಾನ್, ಪುರಂದರ ದೇವಾಡಿಗ, ರಾಜೇಶ್ ಕಡಲಕರೆ, ಮೂಡ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಮಹಮ್ಮದ್ ಅಸ್ಲಂ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

About The Author

Leave a Reply