November 8, 2025
WhatsApp Image 2024-04-21 at 11.38.58 AM

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಕೆಎಸ್ಸಾರ್ಟಿಸಿ ಬನ್ನೊಂದು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ಸಿನ ಟಯರ್‌ ನಡಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.

ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸಿದ್ದಾರೆ.

About The Author

Leave a Reply