Visitors have accessed this post 1025 times.
ಬೆಂಗಳೂರು : ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜನ ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಕೆಲವು ಕಡೆ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆ ಮತದಾನ ಸ್ಥಗಿತಗೊಂಡಿದೆ. ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಮೆಣಸೂರಿನಲ್ಲಿ ಮತದಾನ ಸ್ಥಗಿತಗೊಂಡಿದೆ. ತುಮಕೂರಿನ ಮತಗಟ್ಟೆ 66ರಲ್ಲಿ ಮತಯಂತ್ರ ಕೈಕೊಟ್ಟಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸಲು ಸಿಬ್ಬಂದಿ ಪರದಾಟ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದೆ. ಪಾದರಾಯನಪುರ ಸುಲ್ತಾನ್ ಪಾಳ್ಯ ಮತಗಟ್ಟೆ ಸಂಖ್ಯೆ 46 ರಲ್ಲಿ ಮತದಾನ ತಡವಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಾಸು ಕಳೆದರೂ ಮತದಾನ ಶುರುವಾಗಿಲ್ಲ. ಹೀಗಾಗಿ ಮತಗಟ್ಟೆ ಸಂಖ್ಯೆ 46ರ ಜನರಿಂದ ಆಕ್ರೋಶ ವ್ಯಕ್ತವಾಗಿದೆ.