Visitors have accessed this post 883 times.
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ.
ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್ಗೆ ಗಾಂಜಾ ವ್ಯಸನಿಯಾಗಿರುವ ಆರೋಪಿ ಚರಣ್ ಚಾಕು ಇರಿದಿದ್ದಾನೆ. ಕೂಡಲೇ ಪವನ್ನನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.