Visitors have accessed this post 1043 times.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇವೆ ಎಂಬುದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂವಿಧಾನ ಏನು ಹೇಳುತ್ತದೋ ಅದನ್ನು ಮಾಡಬೇಕು.
ಮತ ಪಡೆಯಲು ಪ್ರಧಾನಿ ಮೋದಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಮೋದಿ ಅವರು ವೋಟಿಗಾಗಿ ಇಂತಹ ಕೀಳುಮಟ್ಟಕ್ಕೆ ಇಳಿಯಬಾರದು ಎಂದು ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲಿದ್ದೇವೆ ಎಂಬ ಮಾಹಿತಿ ಸಿಕ್ಕಿದೆ. ನಮ್ಮ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.