October 22, 2025
WhatsApp Image 2024-04-28 at 8.48.01 AM

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ದ‌.ಕ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಈ ಭಾರಿ 1.20 ಲಕ್ಷ ಮದತಗಳ ಲೀಡ್ ನೊಂದಿಗೆ ಗೆಲುವಿನ ವಿಶ್ವಾಸವನ್ನು ಸ್ವತಃ ಹೇಳಿಕೊಂಡಿದ್ದಾರೆ.

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪದ್ಮರಾಜ್, ದ.ಕ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ. ಪಕ್ಷದ ಪ್ರಚಾರ ಕಾರ್ಯದಲ್ಲಿ ಸಹಕರಿಸಿದ ಪಕ್ಷದ ಎಲ್ಲ ನಾಯಕರು, ಮುಖಂಡರು,ಕಾರ್ಯಕರ್ತರು ಹಾಗೂ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಪದ್ಮರಾಜ್ ಅವರು ಸುದ್ದಿಗೋಷ್ಠಿಯಲ್ಲಿ ಕೃತಜ್ಞತೆ ಸಲ್ಲಿಸಿದರು.

ಚುನಾವಣೆಯ ದಿನದಂದು 8 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಮತದಾರರ ಉತ್ಸಾಹ, ಸ್ಪಂದನೆ ಕಂಡು ಆತ್ಮವಿಶ್ವಾಸ ಹೆಚ್ಚಿದೆ ಎಂದಿದ್ದಾರೆ. ಮತದಾನ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕಿತ್ತು. ಆದರೆ ದ.ಕ. ಜಿಲ್ಲೆಯಲ್ಲಿ ಉತ್ತಮ ಮತದಾನ ಆಗಿದೆ. ಕಾರ್ಯಕರ್ತರ ಆಶಯ, ಮತದಾರರು ಬದಲಾವಣೆ ಬಯಸಿರುವುದು ಜೂ. 4ರಂದು ಫಲಿತಾಂಶದ ದಿನ ತಿಳಿಯಲಿದೆ ಎಂದವರು ಹೇಳಿದರು.

About The Author

Leave a Reply