November 8, 2025
WhatsApp Image 2024-04-29 at 1.14.48 PM

ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.  ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

About The Author

Leave a Reply