November 8, 2025
WhatsApp Image 2024-04-29 at 3.03.43 PM

ಬೆಂಗಳೂರು : ಹಾಸನ ಸಂಸದ, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ  ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇದರ ಜೊತೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಮಾತ್ರವಲ್ಲ ಹೆಚ್  ಡಿ ರೇವಣ್ಣ ಮೇಲೂ ಸಂತ್ರಸ್ಥೆ ದೂರು ನೀಡಿದ್ದಾರೆ. ನಿನ್ನೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವ ಸಂತ್ರಸ್ಥೆ. ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಆಯೋಗ ಭರವಸೆ ನೀಡಿದೆ ಎಂದು ಮಹಿಳಾ‌ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಮಾಹಿತಿ ನೀಡಿದ್ದಾರೆ.

ವಿಡಿಯೋ ವೈರಲ್ ಹಿನ್ನೆಲೆ ಹಾಸನದಲ್ಲಿ ಮತದಾನ ಮಾಡಿದ ದಿನವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೊರಟಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ಜರ್ಮನಿಯ  ಪ್ಲಾಂಕ್ ಪರ್ಟ್ ಗೆ ಪ್ರಯಾಣ ಬೆಳೆಸಿದ್ದಾರೆ. ಇತ್ತ ರಾಜ್ಯ ಸರ್ಕಾರ  ಪ್ರಕರಣದ ತನಿಖೆಗೆ ಎಸ್ ಐಟಿ ತಂಡ ರಚನೆ ಮಾಡಿದೆ. ಐಪಿಎಸ್ ಅಧಿಕಾರಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ ಪೆನ್ನೆಕರ್ ಮತ್ತು ಸೀಮಾ ಲಾಠ್ಕರ್ ಸದಸ್ಯರಾಗಿ ನೇಮಕರಾಗಿದ್ದಾರೆ.ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ. ನೂರಾರು ಹೆಚ್ಚು ಮಕ್ಕಳನ್ನು ಅತ್ಯಾಚಾರ ಮಾಡಿರೋದು ಖಂಡನೀಯ.

ಮಾಜಿ ಪ್ರಧಾನಿಗಳ ಮೊಮ್ಮಗ ಈ ರೀತಿ ಮಾಡಿರೋದು ದೊಡ್ಡ ತಪ್ಪು. ಇಷ್ಟೆಲ್ಲ ಮಗ ಮಾಡಿದ್ರೂ ಅವರಿಗೆ ಗೊತ್ತೇ ಇಲ್ವಾ? ಅಥವಾ ಗೊತ್ತಿದ್ರೂ ಈ ಕೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದ್ರಾ? ಅವರ ತಾಯಿ, ತಂದೆ ಇದಕ್ಕೆಲ್ಲ ಉತ್ತರ ಕೊಡ್ಬೇಕು. ಅವರ ಕುಟುಂಬಕ್ಕೆ ಅಧಿಕಾರ ಇದ್ದರೆ ಸಾಕು. ಅಪ್ಪನಿಗೆ PWD ಇಲಾಖೆಯೇ ಬೇಕು, ಚಿಕ್ಕಪ್ಪ, ಮಗ, ಅತ್ತೆ, ಸೊಸೆ ಎಲ್ಲರಿಗೂ ಅಧಿಕಾರ ಬೇಕು. ಸಿಬಿಐ ಏನು ಮಾಡ್ತಾ ಇತ್ತು? ಸುಮೋಟೊ ಕೇಸ್ ದಾಖಲಿಸಿಕೊಳ್ಳಬೇಕಿತ್ತು. ಕೂಡಲೇ ಈ ಬಗ್ಗೆ ತನಿಖೆ ಆಗ್ಬೇಕು, ನಾವು ಉನ್ನತ ಮಟ್ಟದ ತನಿಖೆಗೆ ನೀಡ್ತೇವೆ ಎಂದು ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಮಹಿಳೆಯರು ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಪೊರಕೆ ಏಟು ಹಾಕಿದರು. ದೇವೇಗೌಡ್ರು ಹಾಗೂ ಹೆಚ್ಡಿಕೆ ಮುಖವಾಡ ಹಾಕಿ ಅಣಕು ಪ್ರದರ್ಶನ ಮಾಡಿದರು. ವಿಕೃತಿ ಕಾಮಿ ಪ್ರಜ್ವಲ್ ರೇವಣ್ಣನಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಗಲ್ಲಿಗೇರಿಸಿ ಗಲ್ಲಿಗೇರಿಸಿ ಪ್ರಜ್ವಲ್  ರೇವಣ್ಣನ ಗಲ್ಲಿಗೇರಿಸಿ ಎಂದ ಕೈ ಕಾರ್ಯಕರ್ತರು , ದೇವೇಗೌಡರ ಕುಟುಂಬವನ್ನು ಗಡಿಪಾರು ಮಾಡಿ ಎಂದು ಘೋಷಣೆ ಕೂಗಿದರು.

 

About The Author

Leave a Reply