
ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಭಾನುವಾರ ಬೆಳಿಗ್ಗೆ ಮನೆ ಮಂದಿ ಧಾರ್ಮಿಕ ಸ್ಥಳಕ್ಕೆ ತೆರಳಿದ್ದು, ಕೆಲ ಹೊತ್ತಿನ ಬಳಿಕ ಹಿಂತಿರುಗಿದಾಗ ಮನೆಯ ಎದುರಿನ ಬಾಗಿಲು ತೆರೆದಿತ್ತು. ಮನೆಯೊಳಗೆ ಹೋಗಿ ಪರಿಶೀಲಿಸಿದಾಗ 29 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 28 ಸಾವಿರ ರೂಪಾಯಿ ನಗದು ಹಣ ಕಳವುಗೈದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


