Visitors have accessed this post 932 times.
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿರುದ್ಧ ಸಾಮಾಜಿಕ ಜಾಲಾ ತಾಣಗಳಲ್ಲಿ ಅಪಪ್ರಚಾರ ಮಾಡಿರುವ ಮತ್ತು ಮಾನಹಾನಿಕರ ಪೋಸ್ಟ್ ಹಾಕಿರುವ 8 ಪ್ರಕರಣಗಳಿಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್‌ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಜಿಲ್ಲಾ ಕಾಂಗ್ರೆಸ್‌ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.