
ಮಂಗಳೂರು:ಮದುವೆ ಸಮಾರಂಭದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಕ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.



ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್ ನಿವಾಸಿ ಗಂಗಾಧರ್ ಬಂಧಿತ ಆರೋಪಿಗಳು.ಕೊಲ್ಯ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂಟ್ವಾಳದ ಅಪ್ರಾಪ್ತ ಬಾಲಕಿ ಬಂದಿದ್ದಾಗ ಈ ಘಟನೆ ನಡೆದಿದೆ. ಮದುವೆ ಮಂಟಪಕ್ಕೆ ತೆರಳುತ್ತಿದ್ದ ಆಕೆಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಸಂತ್ರಸ್ತೆ ಉಳ್ಳಾಲ ಪೊಲೀಸರಿಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.