
ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರ ಮನೆಯಲ್ಲಿ ಎ.30ರಂದು ರಾತ್ರಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭ ಅವರ ಸಂಬಂಧಿಕರೇ ಆದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣು ಗೌಡ, ಹರೀಶ್ ಹಾಗೂ ಇತರರು ಮನೆ ಬಳಿ ಬಂದು ಸೇಸಮ್ಮ ಅವರ ಮಗ ಹರೀಶ್ ನನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದಿದ್ದಾರೆ. ಇದಾದ ಬಳಿಕ ಯೋಗೀಶ್ ಎಂಬಾತ ಬಂದು ಹರೀಶ್ ಹಾಗೂ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಇದನ್ನು ನೋಡಿ ತಡೆಯಲು ಹೋದ ಸೇಸಮ್ಮ ಅವರನ್ನು ಆರೋಪಿಗಳು ಸೇರಿ ದೂಡಿ ಹಾಕಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ .ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ,ಅ ಕ್ರ 28/2024, ಕಲಂ: 448,504, 323,506 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


