October 13, 2025
WhatsApp Image 2024-05-02 at 9.03.04 AM

ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 16,13,800 ರೂ. ಮೌಲ್ಯದ ಸೊತ್ತು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಳ್ಳಾಲ ಪೋಸ್ಟ್ ಆಫೀಸ್ ಮುಂಭಾಗ, ಬಸ್ತಿಪಡ್ಪು ನಿವಾಸಿ ಮೊಹಮ್ಮದ್ ಇಶಾನ್(35), ಉಳ್ಳಾಲ, ಟಿ.ಸಿ. ರೋಡ್, ಅಕ್ಕರೆಕೆರೆ ನಿವಾಸಿ ಜಾಫರ್ ಸಾದಿಕ್(35) ಬಂಧಿತ ಆರೋಪಿಗಳು. ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ಬೃಹತ್ ಪ್ರಮಾಣದ ಎಂಡಿಎಂಎ ಮಾದಕದ್ರವ್ಯವನ್ನು ಅಕ್ರಮವಾಗಿ ದಾಸ್ತಾನಿರಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಬಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಆದ್ದರಿಂದ ಮೇ 1ರಂದು ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿದ್ದರು‌ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳಿಂದ 9,00,000 ರೂ ಮೌಲ್ಯದ 407 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 16,13,800 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply