February 18, 2026
WhatsApp Image 2024-05-02 at 12.12.48 PM

ಬೆಂಗಳೂರು: ಜ್ಞಾನಭಾರತಿ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ರಂಗನಾಥ್ ನಾಯಕ್ (27) ಸಾವನ್ನಪ್ಪಿದ ವಿದ್ಯಾರ್ಥಿ.

ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ರಂಗನಾಥ್ ನಿನ್ನೆ ಬೆಳಗ್ಗೆ ಕ್ಯಾಂಟೀನ್‌ಗೆ ಹೋಗಿ ತಿಂಡಿ ತಿಂದು ರೂಮಿಗೆ ಹೋಗಿ ಲಾಕ್ ಹಾಕಿಕೊಂಡಿದ್ದ. ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಅನುಮಾನ ಬಂದು ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವುದು ಗೊತ್ತಾಗಿದೆ. ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಮೂಲದ ರಂಗನಾಥ್, ಕಳೆದ ಕೆಲ ತಿಂಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ. ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದ. ನಿನ್ನೆ ಬೆಳಗ್ಗೆ ತಿಂಡಿ ತಿಂದು ಮಲಗಿದಾತ ಏಕಾಏಕಿ ಸಾವನ್ನಪ್ಪಿದ್ದಾನೆ. ಹೇಗೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

About The Author

Leave a Reply