ಬಂಟ್ವಾಳ: ಟಿಪ್ಪರ್ ಢಿಕ್ಕಿ : ಸವಾರ ಮೃತ್ಯು…!!

ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಎಂದು ಗುರುತಿಸಲಾಗಿದೆ.
ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ‌ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply