
ಸುರತ್ಕಲ್: ಇಲ್ಲಿನ ಎನ್‌ಐಟಿಕೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಜನರಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಹಾಗೂ ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.



2022ರ ನವೆಂಬರ್‌ನಲ್ಲಿ ಟೋಲ್ ಗೇಟ್ ತೆರವು ಹೋರಾಟ ಸಮಿತಿಯು ಟೋಲ್ ಗೇಟ್ ತೆರವಿಗಾಗಿ ನೇರ ಕಾರ್ಯಾಚಣೆಗೆ ಕರೆ ನೀಡಿತ್ತು. ಈ ಹಿನ್ನೆಲೆ ಸಾವಿರಾರು ಹೋರಾಟಗಾರರು ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿದ್ದರು. ಈ ಸಂದರ್ಭ 250 ಕ್ಕೂ ಅಧಿಕ ಹೋರಾಟಗಾರರನ್ನು ಬಂಧಿಸಲಾಗಿತ್ತು.
ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಸೇರಿ ಒಟ್ಟು 101 ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಇವರೆಲ್ಲರ ವಿರುದ್ಧ 2023ರ ಅಕ್ಟೋಬರ್‌ನಲ್ಲಿ ಸುರತ್ಕಲ್ ಪೊಲೀಸರು ಮಂಗಳೂರು ಜೆಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಈ 101 ಜನ ಹೋರಾಟಗಾರರು ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.