ಉಳ್ಳಾಲ: ಕಾರು ಢಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು

ಉಳ್ಳಾಲ: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್‌ (46) ಅವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಶ್ರೀಕಾಂತ್‌ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಶ್ರೀಕಾಂತ್‌ ಅವರನ್ನು ಅಪಘಾತ ನಡೆಸಿದ ಕಾರು ಚಾಲಕನೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫ‌ಲಕೊಡದೆ ಮೃತಪಟ್ಟಿದ್ದಾರೆ.

ಆಟೋ ಎಲೆಕ್ಟ್ರೀಷಿಯನ್‌ ಕೆಲಸ ನಡೆಸುತ್ತಿದ್ದ ಶ್ರೀಕಾಂತ್‌ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಅವರು ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply