February 18, 2026
WhatsApp Image 2024-05-04 at 3.48.16 PM

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಬಾಲಕ ಕಾಸರಗೋಡು ಚೆರ್ಕಳದ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

About The Author

Leave a Reply