ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.
ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಹಿನ್ನಲೆ ವಿದ್ಯುತ್ ಕಟ್ ಸಮಸ್ಯೆಯಾಗಿದ್ದು, ವಿದ್ಯುತ್ ಕಂಬ ಬದಲಾವಣೆ ಕಾರ್ಯ ಆರಂಭಿಸಲಾಗಿದೆ.