Visitors have accessed this post 456 times.
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್
ಠಾಣಾ ವ್ಯಾಪ್ತಿಯ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ(14 )ಮೃತ ದುರ್ದೈವಿ ಬಾಲಕಿಯರು.
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆಯವರ ಮುಂದೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.
ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂಬ ಕೂಗು ಕೇಳಿ ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.