
ದಾವಣಗೆರೆ: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನನ್ನ ವಿರುದ್ಧ ವಿಧಾನ ಸೌಧದಲ್ಲಿ ತೊಡೆ ತಟ್ಟಿದ್ದರು. ಅವರ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ ಇಬ್ಬರೂ ಸೊಕ್ಕನ್ನೂ ಮುರಿದಿದ್ದೇನೆ.



ಇದಿಷ್ಟೇ ಅಲ್ಲ. ಆ ಪಾದಯಾತ್ರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಕುರುಬ ಸಮಾಜ ಹಾಗೂ ಹಿಂದುಳಿದ ವರ್ಗಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಪಾದಯಾತ್ರೆಯು ಕಾಂಗ್ರೆಸ್‌ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡು, ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆದಿದ್ದೇ ಸಾಧನೆ ಮಾಡಿಕೊಂಡಿದ್ದಾರೆ.
ಹಿಂದುಳಿದವ ದೊಡ್ಡ ಶತೃವೆಂದರೆ ಅದು ಬಿಜೆಪಿ. ಬಿಜೆಪಿಗೆ ಹಿಂದುಳಿದ ವರ್ಗಗಳು ಮತ ಹಾಕುವುದಕ್ಕೆ ಕಾರಣವೇ ಇಲ್ಲ . ಕುರುಬರಿಗೆ ರಾಜ್ಯದಲ್ಲಿ ಬಿಜೆಪಿ ಒಂದೇ ಒಂದು ಕ್ಷೇತ್ರದಲ್ಲೂ ಟಿಕೆಟ್ ಕೊಟ್ಟಿಲ್ಲ. ನೀವೂ ಸಹ ಬಿಜೆಪಿಗೆ ಒಂದೇ ಒಂದು ಮತವನ್ನೂ ನೀಡಬೇಡಿ ಎಂದು ಅವರು ಹೇಳಿದರು.