Visitors have accessed this post 408 times.

ಪ್ರಜ್ವಲ್‌ ರೇವಣ್ಣ ಪ್ರಕರಣ; ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸುವಂತಿಲ್ಲ; ಕೋರ್ಟ್ ತಡೆಯಾಜ್ಞೆ

Visitors have accessed this post 408 times.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದೆ. ಎಸ್​​ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣದ ಹಿನ್ನೆಲೆ ಎಚ್.ಡಿ. ರೇವಣ್ಣ  ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಅರೆಸ್ಟ್​ ಕೂಡಾ ಆಗಿದ್ದಾರೆ.

ಪ್ರಜ್ವಲ್ ರೇವಣ್ಣ  ಹಾಗೂ  ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ. ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಈ ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

Leave a Reply

Your email address will not be published. Required fields are marked *