February 4, 2026
WhatsApp Image 2024-05-07 at 12.07.44 PM

ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳದ ತುಂಬೆ ವಳವೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ.

ಸಂತೋಷ್ ಮೃತದೇಹವು ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆ ರಕ್ತಸಿಕ್ತವಾಗಿ ಬಿದ್ದುಕೊಂಡಿತ್ತು. ಸಭಾಂಗಣದ ಹೊರಗಡೆಯಲ್ಲಿ ಈತನ ಬೈಕ್ ಪತ್ತೆಯಾಗಿದೆ.

ಸಂತೋಷ್ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ ಆದರೆ ಪೊಲೀಸ್ ಮೂಲಗಳ ಪ್ರಕಾರ ಈತ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿರಬೇಕು. ಆ ಸಂದರ್ಭದಲ್ಲಿ ನಿಯಂತ್ರಣ ಕಳೆದು ಕೆಳಗೆ ಬಿದ್ದಿರಬೇಕು ಎಂದು ಶಂಕಿಸಲಾಗಿದೆ.

ಇನ್ನು ಘಟನೆಯ ಸಂಬಂಧ ಹೆಚ್ಚಿನ ವಿವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply