ಬಂಟ್ವಾಳ: ಪ್ರತಿಷ್ಠಿತ ಹೋಟೇಲ್‌ ರೂಂ ನಲ್ಲಿ ತಂಗಿದ್ದ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ:ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಂ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.

ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು,ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಮಾನಸಿಕವಾಗಿ ನೊಂದಿದ್ದ ಕಾರಣವೇ ಈತ ಆತ್ಮಹತ್ಯೆ ‌ಮಾಡಿಕೊಳ್ಳಲು ಕಾರಣವಾಗಿರಬಹುದು ‌ಎಂದು ಪೋಲೀಸರು ಶಂಕಿಸಿದ್ದು,ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಬೇಟಿ ನೀಡಿದ್ದಾರೆ.



Leave a Reply