Visitors have accessed this post 282 times.

ಬೆಳ್ತಂಗಡಿ: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ, ಅಂತಿಮ ನಮನ

Visitors have accessed this post 282 times.

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ ಮೇ.8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಹಳೆಕೋಟೆ ನಿವಾಸಕ್ಕೆ ಆಗಮಿಸಿತು.

ಶಾಸಕ ಹರೀಶ್ ಪೂಂಜ ಬಂಗೇರರ ಅಂತಿಮ ದರ್ಶನ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಂತಿಮ ನಮನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಸ್ಥಳದಲ್ಲಿದ್ದು ಸಹಕರಿಸಿದರು.

ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಳೆಕೋಟೆ ಮನೆಯಿಂದ ಬೆಳ್ತಂಗಡಿ ತಾಲೂಕು ಕ್ರೀಡಾಂಗಣಕ್ಕೆ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ‌ ಸಾರ್ವಜನಿಕ ದರ್ಶನಕ್ಕಾಗಿ ಕೊಂಡೊಯ್ಯಲಾಯಿತು.

ತಾಲೂಕು ಕ್ರೀಡಾಂಗಣದಲ್ಲಿ ಬಂಗೇರರ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದು, ಕಳೆದ ರಾತ್ರಿಯಿಂದಲೇ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ.

ಮಧ್ಯಾಹ್ನ ವೇಳೆಗೆ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕುವೆಟ್ಟು ಗ್ರಾಮದ ಕೇದೆ ಹೊಸಮನೆಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಅವರ ಆಪ್ತ ವಲಯ ಪಾಲ್ಗೊಳ್ಳಲಿದೆ ಎಂದು ತಿಳಿದುಬಂದಿದೆ.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಬೆಳ್ತಂಗಡಿ ತಾಲೂಕು ಮಾತ್ರವಲ್ಲದೆ ರಾಜ್ಯ ಕಂಡ ಅಪ್ರತಿಮ ನಾಯಕ. ಅಭಿಮಾನಿ ವರ್ಗದಿಂದ ಬೆಳ್ತಂಗಡಿಯ ಬಂಗಾರ ಎಂದೇ ಕರೆಸಿಕೊಂಡಿದ್ದ ಅವರು ರಾಜಕೀಯ ಕ್ಷೇತ್ರದಲ್ಲಿ ತನ್ನದೇ ನಡೆಯ ಮೂಲಕ ಬಡವರ್ಗದ ಧ್ವನಿಯಾಗಿದ್ದರು.

Leave a Reply

Your email address will not be published. Required fields are marked *