November 28, 2025
WhatsApp Image 2024-05-10 at 10.07.42 AM

ವಿಟ್ಲ: ಗುರುವಾರ ಪ್ರಕಟಗೊಂಡ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಬಂಟ್ವಾಳ ತಾಲೂಕಿನ ಕನ್ಯಾನ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಉತ್ತಮ ಫಲಿತಾಂಶ ಲಭಿಸಿದೆ.
ಆಮಿನತ್‌ ಸಫೈರಾ 571 ಅಂಕ, ಫಾತಿಮತ್‌ ಬಸಿಲಾ 541 ಅಂಕಗಳೊಂದಿಗೆ ಎ+ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 94.11 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 85 ವಿದ್ಯಾರ್ಥಿಗಳಲ್ಲಿ 80 ಮಂದಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಗುಣಮಟ್ಟದ ಶಿಕ್ಷಣದೊಂದಿಗೆ ಶಿಕ್ಷಕರುಗಳು ಉತ್ತಮ ಬೋಧನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿದ್ದಾರೆ.

About The Author

Leave a Reply