February 15, 2026
WhatsApp Image 2024-05-10 at 10.55.57 AM

ಹಾಸನ: ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದು ಈಕೆ ಸೋಮಶೇಖರ್‌ ಹಾಗೂ ಭಾಗ್ಯ ಅವರ ಪುತ್ರಿಯಾಗಿದ್ದಾರೆ.

ಚೆನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ದೀಪ ಮನೆಯಲ್ಲಿಯೇ ಛಾವಣಿಗೆ ಸೇರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೀಪಾ ಅವರ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಇಂಜಿನಿಯರ್‌ ಆಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author

Leave a Reply