
ಬಂಟ್ವಾಳ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.



ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್ ಗಾಯಗೊಂಡವರು.
ಅನಿಲ್ ಎಂಬವರು ಅವರ ಅತ್ತಿಗೆ ಸ್ವಾತಿಯವರನ್ನುಪಂಜಿಕಲ್ಲುವಿನಿಂದ ನರಿಕೊಂಬು ಮನೆಗೆ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ.
ಸುನೀಲ್ ಪತ್ನಿ ಹಾಗೂ ಕುಟುಂಬದವರ ಜೊತೆ ಕಾರಿನಲ್ಲಿ ದೇವಸ್ಥಾನಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅನಿಲ್ ಅವರ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ.
ಅಪಘಾತದಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಆಗಮಿಸಿ ಟ್ರಾಫಿಕ್ ಸಮಸ್ಯೆ ಪರಿಹರಿಸಿದರು.