Visitors have accessed this post 407 times.
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.
ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.