October 21, 2025
WhatsApp Image 2024-05-11 at 2.22.10 PM

ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದು.

ಪರಿಷತ್ತಿನ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದೆ. ಮತದಾನದ ದಿನದಂದು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಮತದಾರರ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಗುತ್ತದೆ ಎಂದು ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗಿತ್ತು.

About The Author

Leave a Reply