May 25, 2026
WhatsApp Image 2024-05-13 at 9.27.27 AM

ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.

ಕಾರು ಚಾಲಕ ತೌಶೀಫ್ ಎಂಬುವವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತೌಶೀಫ್ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದು, ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ.

ಭಾನುವಾರ ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ಮಾಡಿದ್ದಾರೆ‌.

ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಂತ ಪರಿಣಾಮ ಅಪಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ವಾಹನ ಸವಾರರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

About The Author

Leave a Reply