Visitors have accessed this post 463 times.
ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ನಲ್ಲಿ ಸೋಮವಾರ ನಡೆದಿದೆ.ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಹಲ್ಲೆಗೊಳಗಾಗಿ ಸಾವನ್ನಪ್ಪಿದವರು. ಕೃಷ್ಣ ಅವರು ವಿಪರೀತ ಜ್ವರದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಂದಿದ್ದಾರೆ. ಈ ಸಂದರ್ಭ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದೆ. ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ. ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.Related Posts
ಹೊರಗುತ್ತಿಗೆ ಮೀಸಲಾತಿ ರಾಜ್ಯ ಸರಕಾರದ ಘೋಷಣೆ – ದ.ಕ ಜಿಲ್ಲಾ ಮುಸ್ಲಿಂ ಲೀಗ್ ಸ್ವಾಗತ
Visitors have accessed this post 290 times.
ಮಂಗಳೂರು ಕರ್ನಾಟಕ ರಾಜ್ಯ ಸರಕಾರವು ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನು ಘೋಷಿಸಿದ್ದು ಇದನ್ನು ದಕ್ಷಿಣ ಕನ್ನಡ ಜಿಲ್ಲಾ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಜಿಲ್ಲಾ ಅಧ್ಯಕ್ಷರಾದ ಸಿ ಅಬ್ದುಲ್ ರೆಹ್ಮಾನ್…
ಮೂಲ್ಕಿ: ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತ್ಯು..!
Visitors have accessed this post 566 times.
ಮೂಲ್ಕಿ: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಹಳೆಯಂಗಡಿಯ ಲೈಟ್ ಹೌಸ್…
ಬಂಟ್ವಾಳ: ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
Visitors have accessed this post 664 times.
ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು,…