
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಿಂದ ಜೆಡಿಎಸ್ ಶಾಸಕ ಹೆಚ್‌ಡಿ ರೆವಣ್ಣ ಬಿಡುಗಡೆಯಾಗಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ರೇವಣ್ಣನಿಗೆ ಸೋಮವಾರ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೆಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ಬಿಡುಗಡೆಗೊಂಡಿದ್ದಾರೆ. ಅವರು ಜೈಲಿನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.


