October 23, 2025
WhatsApp Image 2024-05-15 at 12.35.14 PM

ಶಿರ್ವ: ಇಲ್ಲಿನ ಪೈಜಲ್‌ ಇಸ್ಲಾಂ ಮದ್ರಸದ ಬಿಹಾರ ಮೂಲದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ರಾಜ್ಯದ ತಬಾರಕ್‌, ಜಮ್‌ ಶೇಡ್‌, ತಂಜೀರ್‌ ಆಲ್‌ಮ್‌, ಶಾಹಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಮದ್ರಸ ಶಿಕ್ಷಣ ಕಲಿಯುತ್ತಿದ್ದ ಇವರು, ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇಲ್ಲಿಂದ ಅವರು ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

About The Author

Leave a Reply