February 28, 2026
WhatsApp Image 2024-05-16 at 9.29.36 AM

ಬೆಳ್ತಂಗಡಿ: ರೋಗಿಗೆ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಆರೋಪದಲ್ಲಿ ಬಂಧಿತರಾದ ಅರಸಿನಮಕ್ಕಿ ಪಶುಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸೋಮವಾರ ಸಂಜೆ ಕೊಕ್ಕ ಡ ವೃತ್ತದಲ್ಲಿ ಪಶು ವೈದ್ಯಕೀಯ ಪರೀಕ್ಷಕ ಕುಮಾರ್ ಎಂಬುವರು ಹಲ್ಲೆ ನಡೆಸಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ (58) ಎಂಬುವರು ಕುಸಿದು ಬಿದ್ದು ಮೃತಪಟ್ಟಿದ್ದರು ಎನ್ನಲಾಗಿತ್ತು.

ಘಟನೆ ಕುರಿತಂತೆ ಮೃತರ ಪತ್ನಿ ಭಾರತಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು , ಮೇ14ರಂದು ಬಂಧಿಸಲಾಗಿತ್ತು . ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀ ಕ್ಷಕ ವಸಂತ ಆರ್.ಆಚಾರ್ ಮತ್ತು ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.

About The Author

Leave a Reply