August 30, 2025
WhatsApp Image 2024-05-16 at 11.08.11 AM

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 270 ಗ್ರಾಂ ಎಂಡಿಎಂಎ ಯನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಹೊರವಲಯದ ದೇರಳಕಟ್ಟೆಯ ಪರಿಸರದಲ್ಲಿ ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಿಜೈಯ ಅಮೀನ್ ಯಾನೆ ರಾಫಿ (23), ಅಡ್ಡೂರಿನ ಸಿನಾನ್ ಯಾನೆ ಅಬ್ದುಲ್ಲಾ (23), ಬಂದರ್ ಜೆಎಂ ರಸ್ತೆಯ ನೌಮಾನ್(22), ಬೋಳಿಯಾರ್‌ನ ಕಂಡಿಮಾರ್‌ನ ಸಫೀಲ್(23)ರನ್ನು ಬಂಧಿಸಿದರು.

ಆರೋಪಿಗಳ ಪೈಕಿ ಅಮೀನ್ ಯಾನೆ ರಾಫಿ ಎಂಬಾತನ ವಿರುದ್ಧ 2021ರಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ.

ಆರೋಪಿಗಳಿಂದ 6,50,000 ಲಕ್ಷ ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್‌ಗಳು, ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 14,85,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈಗಳಾದ ಶರಣಪ್ಪಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ವರ್ಗವು ಪಾಲ್ಗೊಂಡಿತ್ತು.

About The Author

Leave a Reply