Visitors have accessed this post 480 times.
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದಿದ್ದು, ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ನಡೆದಿದೆ.
ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಅಪಘಾತದಲ್ಲಿ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೀಪ್ ಚಾಲಕ ಅಜಾಗರೂಕತೆಯಿಂದ ಒಮ್ಮೆಲೆ ಬಂಟ್ವಾಳ ಕಡೆಗೆ ತಿರುಗಿಸಿದ್ದಾನೆ. ಪರಿಣಾಮ ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಜೀಪ್ ಡಿಕ್ಕಿಯಾಗಿದೆ. ತಕ್ಷಣ ಸ್ಥಳೀಯರು ಗಾಯಾಳುವನ್ನು ಪುಂಜಾಲಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜೀಪ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾಧಿಕಾರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.