October 28, 2025
WhatsApp Image 2024-05-18 at 8.43.56 AM

ಮಂಗಳೂರು: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು.

ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು.

1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.

About The Author

Leave a Reply