ಕಾರ್ಕಳ: ಟಿಪ್ಪರ್ – ಬೈಕ್ ನಡುವೆ ಢಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಮೇ 20ರ ಬೆಳಿಗ್ಗೆ ಸಂಭವಿಸಿದೆ. ಪಳ್ಳಿ ಗರಡಿಗೆ ಸಾಗುವ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಸ್ಕೂಟಿ ಸವಾರ ನೇಪಾಳಿ ಮೂಲದ ಕಮಲ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಸನ್ನ ಮತ್ತು ಬಚ್ಚನ್‌ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇವರಲ್ಲಿ ಓರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡಿಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply