February 16, 2026
WhatsApp Image 2024-05-22 at 9.16.44 AM

ಮಾಜಿ ಸಂಸದ ಇಕ್ಬಾಲ್‌ ಅಹ್ಮದ್‌ ಸರಡಗಿ (೮೧) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ.ಧರ್ಮಸಿಂಗ್‌ ಪರಮಾಪ್ತರಾಗಿದ್ದರು, ಕಳೆದ ಕೆಲದ ಇನಗಳ ಹಿಂದೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈದರಾಬಾದ್‌ ನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಎರಡು ದಿನಗಳ ಹಿಂದಷ್ಟೇ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೇ ನಿಧನರಾಗಿದ್ದಾರೆ.

ಇಂದು ಕಲಬುರಗಿ ನಗರದ ಐವಾನ್‌ -ಇ-ಶಾಹಿ ಪ್ರದೇಶದಲ್ಲಿರುವ ನಿವಾಸದಲ್ಲಿ ಇಡೀ ದಿನ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ ೫ ಗಂಟೆ ನಂತರ ನಗರದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ನಡೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

About The Author

Leave a Reply