Visitors have accessed this post 139 times.

ಶಾಸಕ ವಸಂತ ಬಂಗೇರ ಹೆಸರು ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಇಡಲು ಸರ್ಕಾರ ಸಿದ್ಧ – ಸಿಎಂ ಸಿದ್ದರಾಮಯ್ಯ

Visitors have accessed this post 139 times.

ಬೆಳ್ತಂಗಡಿ : ನಮ್ಮನ್ನಗಲಿದ ಮಾಜಿ ಶಾಸಕ ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ತಂಗುದಾಣಕ್ಕೆ ಇಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಅವರ ಪ್ರತಿಮೆಯನ್ನು ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಳ್ತಂಗಡಿಯ ಕುವೆಟ್ಟುವಿನಲ್ಲಿ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ 1983ರಲ್ಲಿ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವರು ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರು‌. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಹೇಳಿದರು. ಬಂಗೇರ ಅವರು ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನ ಸಾರ್ಥಕಗೊಳಿಸಿ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ. ಶಾಸಕನಾಗಿದ್ದಾಗ ಅವರು ಮಂತ್ರಿಯಾಗಲು ಎಂದೂ ಲಾಭಿ ಮಾಡಿದವರಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರೆ ಈ ಬಾರಿ ಮಂತ್ರಿಯಾಗುತ್ತಿದ್ದರು.

ಇಷ್ಟು ಬೇಗ ನಮ್ಮನ್ನು ಅಗಲಿ ಹೊರಡುತ್ತಾರೆ ಅಂದುಕೊಂಡಿರಲಿಲ್ಲ. ಅತ್ಯಂತ ದುಃಖದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ನಮ್ಮಿಬ್ಬರದ್ದು ದೀರ್ಘಕಾಲದ ಸ್ನೇಹ. ನಾನೀಗ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ದುಃಖವನ್ನು ತಡೆಯುವ ಶಕ್ತಿ ದೇವರು ಕೊಡಲಿ ಎಂದರು. ಈ ವೇಳೆ ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್, ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *