October 23, 2025
WhatsApp Image 2024-05-20 at 10.27.14 AM

ಬೆಳ್ತಂಗಡಿ: ಬುಧವಾರ ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಅವರಿಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನ ವಿಚಾರಣೆಗೆ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಬುಧವಾರ ಬೆಳಗ್ಗೆ ಮನೆಗೆ ತೆರಳಿದ್ದರು. ಆದರೆ ಅರೆಸ್ಟ್ ಮಾಡಲು ಅವರ ಮನೆಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಸಂಜೆ ವೇಳೆ ಸ್ಥಳಕ್ಕೆ ಬಂದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗಿದ್ದರು. ರಾತ್ರಿ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಃ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ.

About The Author

Leave a Reply