BREAKING : ಮಾಜಿ ಸ್ಪೀಕರ್ ‘ಕಾಗೋಡು ತಿಮ್ಮಪ್ಪ’ ಆಸ್ಪತ್ರೆಗೆ ದಾಖಲು.!

ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ತಕ್ಷಣವೇ ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಈಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬದವರು ಶಿವಮೊಗ್ಗಕ್ಕೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ ಹಾಗು ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave a Reply