October 26, 2025
WhatsApp Image 2024-05-24 at 4.28.08 PM

ಬಾಗಲಕೋಟೆ: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಬದುಕಿದ ಮಗು. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್ ವಾಹನದಲ್ಲಿ ಬರುವಾಗ ಮಗುವಿಗೆ ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಅಂತ ಬಂದಿದ್ದು, ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟರೆ, ಇತ್ತ ಅಂತ್ಯಸಂಸ್ಕಾರಕ್ಕೆಂದು ಬಂದವರಿಗೆ ಅಚ್ಚರಿಯಾಗಿದೆ. ಬಳಿಕ ಇದು ಮುರ್ತುಜಾ ಖಾದ್ರಿ ಪವಾಡ ಎಂದು ನಂಬಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದುಕೊಂಡು ಹೋದರು. ಸದ್ಯ ಮಗಿವಿಗೆ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

About The Author

Leave a Reply