October 26, 2025
WhatsApp Image 2024-05-25 at 11.55.52 AM

ಬೆಂಗಳೂರು: ಮೂರು ವರ್ಷಗಳಿಗೂ ಹೆಚ್ಚು ಸಮಯದಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸರಕಾರ ಕೊನೆಗೂ ಮನಸ್ಸು ಮಾಡಿದೆ. ಚುನಾವಣೆಗೆ ತಕ್ಷಣದಿಂದ ತಯಾರಿ ಆರಂಭಿಸಲು ಆಡಳಿತಾರೂಢ ಕಾಂಗ್ರೆಸ್‌ ತನ್ನ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಿದೆ.ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭಾ ಚುನಾವಣೆ ಫಲಿತಾಂಶ(ಜೂನ್ 4) ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸುತ್ತೇವೆ. ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂದಿದ್ದಾರೆ.

About The Author

Leave a Reply