ಉಡುಪಿ: ಬಿಜೆಪಿಯಿಂದ ರಘುಪತಿ ಭಟ್‌ ಉಚ್ಚಾಟನೆ

ಉಡುಪಿ:  ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಟಾಟನೆ ಮಾಡಿದೆ.

ಮಾಜಿ ಶಾಸಕ ರಘುಪತಿ ಭಟ್ ಅವರು ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್​​ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಈ ಕ್ಷೇತ್ರದಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಅಲ್ಲದೆ, ಶಿಕ್ಷಕರ ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿತ್ತು. ಇದು ರಘುಪತಿ ಭಟ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದರ ಬೆನ್ನಲ್ಲೇ ಇದೀಗ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

Leave a Reply