
ಹಾಸನ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ಕಂದಲಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.



ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ ಕಾರಿನಲ್ಲಿದ್ದ ಒಂದೇ ಕುಟುಂಬದ ಎಲ್ಲ ಆರು ಜನರೂ ಮೃತರಾದ ದಾರುಣ ಘಟನೆ
ಮೃತರನ್ನು ಹೊಸಕೋಟೆ ತಾಲೂಕಿನ ಕಾರಹಳ್ಳಿ ಮೂಲದವರಾದ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಟೊಯೋಟಾ ಇಟಿಯೋಸ್ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೈನರ್‌ಗೆ ಗುದ್ದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ.